ಪ್ರಮುಖ ಪಾತ್ರವಹಿಸಿದ ಸಂಸದ ಡಾ.ಸಿ.ಎನ್.ಮಂಜುನಾಥ್
ರಾಮನಗರ, ಡಿ 2: ಕಾಡಾನೆಗಳ ಚಲನವಲನವನ್ನು ವೀಕ್ಷಿಸಲು ಅರಣ್ಯ ಇಲಾಖೆ ಇದೀಗ ಡ್ರೋನ್ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ.

ಕಾಡಾನೆಗಳ ದಾಳಿಯಿಂದಾಗಿ ಪ್ರತಿ ವರ್ಷ ಸಾವಿರಾರು ಎಕರೆ ಬೆಳೆ ನಾಶ ಆಗುತ್ತಿದ್ದು ಇದರಿಂದಾಗಿ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರಲ್ಲಿ ಡ್ರೋನ್ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಕಲ್ಪನೆ ಮೊಳಕೆಯೊಡೆದಿದೆ.
ಈ ಬಗ್ಗೆ ಅವರು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಹಲವು ಖಾಸಗಿ ಸಂಸ್ಥೆಗಳ ಜೊತೆಗೂಡಿ ಚರ್ಚೆ ನಡೆಸಿದರು. ಸಿಎಸ್‌ಆರ್ ಅನುದಾನ ಬಳಸಿಕೊಂಡು ಡ್ರೋನ್ ತಂತ್ರe್ಞÁನದ ಮೂಲಕ ಕಾಡಾನೆಗಳ ದಾಳಿಯನ್ನು ನಿಯಂತ್ರಿಸಲು ಕಾರ್ಯ ರೂಪಿಸಲಾಗಿತ್ತು.
ಇದೀಗ ಪ್ರಾಯೋಗಿಕವಾಗಿ ಕೋಡಿಹಳ್ಳಿ ಬಳಿಯ ಬೊಮ್ಮಸಂದ್ರ ವ್ಯಾಪ್ತಿಯಲ್ಲಿ ಸುಮಾರು ೨೫ ಆನೆಗಳ ಹಿಂಡು ಕಾಡಿನಿಂದ ಹೊರಬರತ್ತಿರುವುದನ್ನು ಡ್ರೋನ್ ತಂತ್ರಜ್ಞಾದ ಮೂಲಕ ಗುರುತಿಸಿ ಅವುಗಳನ್ನು ಪುನಃ ಕಾಡಿಗೆ ಅಟ್ಟಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ತೀವ್ರವಾಗಿದ್ದು ವಿಶೇಷವಾಗಿ ಬನ್ನೇರುಘಟ್ಟ, ಕೋಡಿಹಳ್ಳಿ, ಸಾತನೂರು, ಮಾಗಡಿ, ಚನ್ನಪಟ್ಟಣ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಸಾಕಷ್ಟು ಬೆಳೆ ಹಾನಿಯ ಜೊತೆಗೆ ಆನೆ ದಾಳಿಯಿಂದಾಗಿ ಕೆಲ ಕಡೆ ಸಾವು ಸಹ ಸಂಭವಿಸಿದೆ. ಡ್ರೋನ್ ತಂತ್ರಜ್ಞಾನದ ಮೂಲಕ ಕಾಡಾನೆಗಳ ಚಲನವಲನ ವೀಕ್ಷಣೆ ಸಹಕಾರಿಯಾಗಲಿದೆ ಎಂದು ಆಶಿಸಲಾಗಿದೆ.
ಡ್ರೋನ್ ತಂತ್ರಜ್ಞಾನದ ಬಳಕೆ ರೂಪಿಸಿವಲ್ಲಿ ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರಮುಖ ಪಾತ್ರ ವಹಿಸಿದ್ದಾರೆ. ಡ್ರೋನ್ ತಂತ್ರಜ್ಞಾನ ಬಳಸಿ ಕಾಡಾನೆಗಳು ಕಾಡನಿಂದ ಹೊರಬರುವುದನ್ನು ತಡೆಯಲು ಸಾಧ್ಯವಿದೆ ಎಂದು ಪ್ರಾಯೋಗಿಕ ಬಳಕೆಯಲ್ಲಿ ದೃಢಪಟ್ಟಿದೆ.
– ಬಿ.ವಿ.ಎಸ್
