ಕ್ರಿಕೆಟ್ ವಿಶ್ವ ಕಪ್: ಜಿಲ್ಲಾ ಕ್ರೀಡಾಂಗಣದಲ್ಲಿ ನೇರ ಪ್ರಸಾರ

ರಾಮನಗರ: ವಿಶ್ವಕಪ್-2023ರ ಫೈನಲ್ ಪಂದ್ಯಾವಳಿ ಉಚಿತ ನೇರ ಪ್ರಸಾರದ ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಅನಿತಾ ತಿಳಿಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಮಧ್ಯ ನಡೆಯುವ ವಿಶ್ವಕಪ್-2023ರ ಫೈನಲ್ ಪಂದ್ಯಾವಳಿಯ 2023ರ ನವೆಂಬರ್ 19ರ ಭಾನುವಾರ ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದ್ದು, ಸದರಿ ಪಂದ್ಯಾವಳಿಯ ಉಚಿತ ನೇರ ಪ್ರಸಾರವನ್ನು ಉತ್ತಮವಾದ ಎಲ್.ಇ.ಡಿ ಪರದೆ ಮತ್ತು ಸೌಂಡ್ ಸಿಸ್ಟಂನೊಂದಿಗೆ ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಕ್ರಿಕೆಟ್ ಪಂದ್ಯಾವಳಿಯ ವಿಕ್ಷಣೆಗೆ ಕ್ರೀಡಾಪಟುಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.