ಖಾಸಗಿ ಶಾಲೆಗಳ ಶಿಕ್ಷಕರಿಗೂ ಸರ್ಕಾರ ವಿಶೇಷ ಪ್ಯಾಕೇಜ್‍ ಘೋಷಿಸಬೇಕು – ರವಿಗೌಡ

ರಾಮನಗರ:ಖಾಸಗಿ ಶಾಲಾ ಶಿಕ್ಷಕರಿಗೂ ಕೋವಿಡ್ 19  ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಖಾಸಗಿ ಶಾಲಾ ಶಿಕ್ಷಕರ ಒಕ್ಕೂಟ, ರಾಮನಗರ ಜಿಲ್ಲೆ ಅಧ್ಯಕ್ಷ ಚೌಡಯ್ಯ ಅಲಿಯಾಸ್ ರವಿಗೌಡ ಆಗ್ರಹಿಸಿದರು.

ನಗರದಲ್ಲಿ ಡಿಡಿಪಿಐ ಸೋಮಶೇಖರಯ್ಯ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸರ್ಕಾರ ತಮ್ಮ ಬೇಡಿಕೆ ಈಡೇರಿಸುವವರೆಗೂ ಎಸ್.ಎಸ್.ಎಲ್.ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಭತ್ಯೆಯನ್ನು ಬಹಿಷ್ಕರಿಸುವುದಾಗಿ ತಿಳಿಸಿದರು.

ಕೋವಿಡ್ 19 ಲಾಕ್‌ಡೌನ್ ಹಿನ್ನೆಲೆಯಲ್ಲಿ ಬೋಧನಾ ಶುಲ್ಕ ಸಂಗ್ರಹವಾಗುತ್ತಿಲ್ಲ. ಕಳೆದ 3 ತಿಂಗಳುಗಳಿಂದ ಅನೇಕ ಶಿಕ್ಷಣ ಸಂಸ್ಥೆಗಳು ತಮ್ಮ ಶಿಕ್ಷಕರಿಗೆ ವೇತನ ಪಾವತಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ತಮಗೆ ಆರೋಗ್ಯ ವಿಮೆಯಾಗಲಿ, ಕನಿಷ್ಠ ವೇತನವಾಗಲಿ, ವಿಶೇಷ ಪ್ಯಾಕೇಜ್ ಆಗಲಿ ಘೋಷಿಸಿಲ್ಲ. ಅನೇಕ ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಂಡಾಗ್ಯೂ ತಮ್ಮನ್ನು ಸರ್ಕಾರ ನಿರ್ಲಕ್ಷಿಸಿದೆ ಎಂದರು. ಸರ್ಕಾರದ ನಿರ್ಲಕ್ಷವನ್ನು ವಿರೋಧಿಸಿ ಮೌಲ್ಯ ಮಾಪನದ ಎಲ್ಲಾ ದಿನಗಳಲ್ಲೂ ತೋಳಿಗೆ ಕಪ್ಪು ಪಟ್ಟಿ ಧರಿಸುವುದಾಗಿ  ತಿಳಿಸಿದರು.

ರಾಜ್ಯದಲ್ಲಿ ಸುಮಾರು 3 ಲಕ್ಷ ಖಾಸಗಿ ಶಾಲಾ ಶಿಕ್ಷಕರಿದ್ದಾರೆ. ತಾವೂ ಸಹ ಮನುಷ್ಯರೆ, ತಮಗೂ ಕುಟುಂಬವಿದೆ. ಮಕ್ಕಳಿದ್ದಾರೆ. ವಯಸ್ಸಾದ ತಂದೆ-ತಾು ಇದ್ದಾರೆ. ಅವರನೆಲ್ಲ ಘೋಸಲು ಆರ್ಥಿಕ ಹೊರೆಯಾಗುತ್ತಿದೆ. ಇಲ್ಲಿಯವರೆಗೂ ತಮ್ಮನ್ನು ಸಾಕಿ ಸಲುಹಿದ ಶಿಕ್ಷಣ ಸಂಸ್ಥೆಗಳಿಗೆ ಪೋಷಕರಿಂದ ಶುಲ್ಕ ಪಾವತಿಯಾಗದ ಕಾರಣ ತಮ್ಮ ಶಿಕ್ಷಕರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ. ಆದರೆ ತಮ್ಮ ಕಣ್ಣೀರಿನ ಗೋಳು ಯಾರಿಗೂ ಗೊತ್ತಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಎಲ್ಲಾ ಪಕ್ಷಗಳ ಪ್ರತಿನಿಧಿಗಳು ಸಹ ಕಣ್ಣು ಮುಚ್ಚಿ ಕುಳಿತಿದ್ದಾರೆ. ಖಾಸಗಿ ಶಾಲೆಗಳ ಶಿಕ್ಷಕರಿಗೂ ಸರ್ಕರವೇ ವೇತನ ಕೊಡಲಿ ಎಂದು ಒತ್ತಾಯಿಸಿದರು.

ಖಾಸಗಿ ಶಾಲೆಗಳು ಶುಲ್ಕ ಹೆಚ್ಚಿಸಬಾರದು ಎಂದು ಸರ್ಕಾರ ಆದೇಶಿಸಿದೆ, ಆದರೆ ಸರ್ಕಾರಿ ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳ ಶುಲ್ಕವನ್ನು ಸರ್ಕಾರವೇ ಹೆಚ್ಚಿಸಿದೆ ಎಂದು ದೂರಿದರು.

ಈ ವೇಳೆ ಸಂಘಟನೆಯ ಉಪಾಧ್ಯಕ್ಷ ಎ.ಎನ್.ನಾಗೇಶ್, ಕಾರ್ಯದರ್ಶಿ ಕಿರಣ್ ಕುಮಾರ್, ಸಂ.ಕಾರ್ಯದರ್ಶಿ ಟಿ.ವಿ.ನಾರಾಯಣ್, ಕಾರ್ಯಕಾರಿಣಿ ಸದಸ್ಯರಾದ ಲಕ್ಷ್ಮೀ ಎಸ್ ಕುಮಾರ್, ಶ್ರೀಧರ್ ಮುಂತಾದವರು ಹಾಜರಿದ್ದರು.

…………..