ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಗೆ ವಾಸವಿ ಶಾಲೆಯ ವಿದ್ಯಾರ್ಥಿಗಳ ಆಯ್ಕೆ

ರಾಮನಗರ: ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ತಾಲ್ಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2024-25ರಲ್ಲಿ ಭಾಗವಹಿಸಿದ್ದ ವಾಸವಿ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಯೋಗ ಸ್ಪರ್ಧೆಯಲ್ಲಿ ವಿಜೇತರಾಗಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದದ್ದಾರೆ.
ನಗರದ ಗುರುಭವನದಲ್ಲಿ ಮಂಗಳವಾರ ನಡೆದ ಯೋಗ ಸ್ಪರ್ಧೆಯಲ್ಲಿ ವಾಸವಿ ಶಾಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಜಯಂತ್ ಆಚಾರ್ ಪ್ರಥಮ, 7ನೇ ತರಗತಿಯ ಪೂಜಿತ್.ಸಿ ತೃತೀಯ, ಧೀರೇಶ್ ಕುಮಾರ್ ಚತುರ್ಥ ಹಾಗೂ ಧನುಷ್ ಗೌಡ ಪಂಚಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಎಲ್ಲ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಯೋಗ ಗುರು ಶ್ರೀಶೈಲ ಹೂಗಾರ್, ಶಾಲೆಯ ಮುಖ್ಯ ಶಿಕ್ಷಕಿ ವಿ.ಕೆ.ವಿಜಯಪ್ರಭಾ ತಿಳಿಸಿದ್ದಾರೆ.