ರಾಮನಗರ: ನಿರಂತರ ಮಳೆ ಕಾರಣ ಜಿಲ್ಲೆಯಲ್ಲಿ ಕೆರೆ, ಕಟ್ಟೆಗಳು ತುಂಬಿ ಕೋಡಿ ಹರಿದಿವೆ. ಹಳ್ಳ ಕೊಳ್ಳಗಳಲ್ಲಿಯೂ ನೀರು ಪ್ರವಾಹದಂತೆ ಹರಿಯುತ್ತಿದ್ದು. ಸೇತುವೆಗಳಿಗೆ ಅಪಾಯವೊಡ್ಡಿದೆ.
ರಾಮನಗರ ತಾಲೂಕಿನ ಮೆಳೇಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿದ್ದ ರಸ್ತೆಯಲ್ಲಿ ಹಳ್ಳಕ್ಕೆ ನಿರ್ಮಿಸಿದ ಸೇತುವೆ
ಭಾನುವಾರ ರಾತ್ರಿ ಕೊಚ್ಚಿ ಹೋಗಿದೆ.
ಸೇತುವೆ ಕೊಚ್ಚಿ ಹೋಗಿದ್ದರಿಂದ ಮೆಳೇಹಳ್ಳಿ ಸೇರಿದಂತೆ ಐದಾರು ಗ್ರಾಮಗಳ ಸಂಪರ್ಕ ಕಡಿತವಾಗಿದೆ.
ಇದೀಗ ಈ ಗ್ರಾಮಗಳ ಜನತೆ ಐದು ಕಿಲೋಮೀಟರ್ ಸುತ್ತಿ ಬಳಸಿ ಮಾಗಡಿ-ರಾಮನಗರ ರಸ್ತೆಗೆ ಬರಬೇಕಾಗಿದೆ.
ಹಳ್ಳಕ್ಕೆ ನರ್ಮಿಸಿದ ಸೇತುವೆ ಅನೇಕ ವರ್ಷಗಳಿಂದ ದುಸ್ಥಿತಿಯಾಗಿ ಬಿರುಕು ಬಿಟ್ಟಿತ್ತು. ಹಳ್ಳದಲ್ಲಿ ನೀರಿನ ಹರಿವು ಹೆಚ್ಚಾಗಿ ಕಳೆದ ಹಲವು ದಿನಗಳಿಂದ ಸೇತುವೆ ಮೇಲೆ ನೀರು ಹರಿಯುತ್ತಿತ್ತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಮೆಳೇಹಳ್ಳಿ, ಮಾರೇಗೌಡನದೊಡ್ಡಿ, ಅರಳಿಮರದೊಡ್ಡಿ, ಜೋಗಿದೊಡ್ಡಿ, ಅಂಕನಹಳ್ಳಿ, ಹುಣಸೇದೊಡ್ಡಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆ ಇದಾಗಿತ್ತು.

