ಪಿಯೂಸಿ ವಿದ್ಯಾಥಿಗಳೇ ಗಮನಿಸಿ!

ಜೆಇಇ, ಸಿಇಟಿ, ನೀಟ್ ಪರೀಕ್ಷೆಗೆ ತರಬೇತಿ ಬೇಕೆ? ಏ.25ರಂದು ನಗರಸಭೆಯಲ್ಲಿ ಸಂವಾದ ಸಭೆಗೆ ಬನ್ನಿ

ರಾಮನಗರ (23/04/2025): ಪಿಯೂಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ನಗರಸಭೆವತಿಯಿಂದ ಜೆಇಇ, ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ಕೋಚಿಂಗ್ ನೀಡಲು ಉದ್ದೇಶಿಸಿರುವ ಹಿನ್ನೆಲೆಯಲ್ಲಿ ಇದೇ ಏಪ್ರಿಲ್ 25ರ ಶುಕ್ರವಾರ ಇಲ್ಲಿನ ನಗರಸಭೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ನಗರಸಭಾಧ್ಯಕ್ಷ ಕೆ.ಶೇಷಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2025-26ನೇ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯೂಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ತರಬೇತಿ ಉಪಯುಕ್ತವಾಗಲಿದೆ.

ಜೆಇಇ, ಸಿಇಟಿ ಮತ್ತು ನೀಟ್ ಪರೀಕ್ಷೆಗಳನ್ನು ಸಮರ್ಥವಾಗಿ ಎದುರಿಸಲು ಅನುಕೂಲವಾಗುವಂತೆ ತರಬೇತಿ ನೀಡಲು ರಾಮನಗರ ನಗರಸಭೆಯು ಅಕ್ಕಾ ಐಎಎಸ್ ಅಕಾಡೆಮಿಯೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಏಪ್ರಿಲ್ 25ರಂದು ಅಕ್ಕಾ ಐಎಎಸ್ ಅಕಾಡೆಮಿಯ ಸ್ಥಾಪಕರು ಹಾಗೂ ನಿರ್ದೇಶಕರಾದ ಡಾ.ಶಿವಕುಮಾರ್ ಅವರು ವಿದ್ಯಾರ್ಥಿಗಳಿಗೆ ಬ್ರೈನ್ ಸ್ಟಾರ್ಮಿಂಗ್ ಸೆಷನ್ ನಡೆಸಲು ಉದ್ದೇಶಿಸಿದ್ದಾರೆ. ಆಸಕ್ತ ವಿದ್ಯಾರ್ಥಿಗಳು ಈ ಸಭೆಯಲ್ಲಿ ಭಾಗವಹಿಸಬಹುದು ಎಂದು ನಗರಸಭಾಧ್ಯಕ್ಷರು ತಿಳಿಸಿದ್ದಾರೆ. ಮುಂದೆ ನಡೆಯುವ ತರಬೇತಿಗೆ ವಿದ್ಯಾರ್ಥಿಗಳು ಅಂದೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶವಿದೆ.