ರಾಮನಗರ: ನಗರದ ಎಂ.ಜಿ.ರಸ್ತೆಯಲ್ಲಿರುವ ಗುಪ್ತ ಕ್ಲಾತ್ ಸ್ಟೋರ್ ಮಾಲೀಕ ಕೆ.ಎನ್.ಸುರೇಂದ್ರನಾಥ ಗುಪ್ತ ಅವರು ವಯೋ ಸಹಜ ಕಾರಣದಿಂದ ನಿಧನ ಹೊಂದಿದ್ದಾರೆ. ಅವರಿಗೆ ೮೯ ವರ್ಷ ವಯಸ್ಸಾಗಿತ್ತು. ಕಳೆದ ೭ ದಶಕಗಳಿಂದ ಜವಳಿ ವ್ಯಾಪಾರ ಮಾಡುತ್ತಿದ್ದ ಅವರು ಹಲವಾರು ಸಂಘ – ಸಂಸ್ಥೆಗಳ ಮೂಲಕ ಹಾಗೂ ವೈಯಕ್ತಿಕವಾಗಿ ಸಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.
ನಗರದ ಶ್ರೀ ವಾಸವಿ ವಿದ್ಯಾನಿಕೇತನ ಶಾಲೆಯನ್ನು ನಿರ್ವಹಿಸುತ್ತಿರುವ ವಾಸವಿ ವಿದ್ಯಾನಿಕೇತನ ಟ್ರಸ್ಟ್ನ ಹಾಲಿ ಅಧ್ಯಕ್ಷರಾಗಿದ್ದರು. ರೋಟರಿ ರಾಮನಗರದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರ್ಥಿಕ ಶಿಸ್ತಿಗೆ ಹೆಸರಾದ ಇವರು ರೋಟರಿ ರಾಮನಗರದ ಖಜಾಂಚಿಯಾಗಿ ಅನೇಕ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ರಾಮನಗರ ಆರ್ಯ ವೈಶ್ಯ ಸಭಾದ ಅಧ್ಯಕ್ಷರಾಗಿ ಹಾಗೂ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡಿದ್ದರು.
ಮೃತರ ಆತ್ಮಕ್ಕೆ ಶಾಂತಿ ಕೋರಿ ವಾಸವಿ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಒಂದು ನಿಮಿಷಗಳ ಕಾಲ ಮೌನ ಆಚರಿಸಿದರು.
ರಾಮನಗರದ ಆರ್ಯ ವೈಶ್ಯ ಸಭಾ, ವಾಸವಿ ಮಹಿಳಾ ಮಂಡಳಿ, ವಾಸವಿ ಯೂತ್ಸ್ ಫೋರಂ, ವಾಸವಿ ವಿದ್ಯಾನಿಕೇತನ ಟ್ರಸ್ಟ್ ಸೇರಿದಂತೆ ಅನೇಕ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಸಮಾಜದ ಗಣ್ಯರು ಮೃತರ ಆತ್ಮಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

