ರಾಮನಗರ: ನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಐತಿಹಾಸಿಕ ಕರಗ ಮಹೋತ್ಸವದ ಅಂಗವಾಗಿ ಅರಳೀಮರ ವೃತ್ತದಲ್ಲಿ ಇದೇ ಜುಲೈ 19ರ ಮಂಗಳವಾರ ಸಂಜೆ ರಸಮಂಜರಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಯುವ ಸೇವಾ ಸಮಿತಿ ಗೌರವಧ್ಯಕ್ಷ ಸಿಎನ್ ಆರ್ ವೆಂಕಟೇಶ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಕರೆಯಲಾಗಿದ್ದ ಸುದ್ದಿಗೋಷ್ಟಿ ಯಲ್ಲಿ ಅವರು ಮಾತನಾಡಿದರು.
ಕೆಪಿಸಿಸಿ ಸದಸ್ಯರಾದ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಎಂಎಲ್ಸಿ ಗಳಾದ ಡಿ.ಕೆ.ಸುರೇಶ್, ವಿಧಾನ ಪರಿಷತ್ತು ಸದಸ್ಯರಾದ ಸಿ.ಎಂ.ಲಿಂಗಪ್ಪ, ಎಸ್.ರವಿ, ಮಾಜಿ ಶಾಸಕರಾದ ಕೆ.ರಾಜು, ಎಚ್.ಸಿ.ಬಾಲಕೃಷ್ಣ, ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರಾದ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.
ಕರೋನಾ ಹಿನ್ನಲೆಯಲ್ಲಿ ಮೂರು ವರ್ಷಗಳಿಂದ ಕಾರ್ಯಕ್ರಮ ಮಾಡಲು ಸಾಧ್ಯವಾಗಿರಲಿಲ್ಲ. ಈ ಭಾರಿ ಭಕ್ತರಿಗೆ ರಸದೌತಣ ಉಣ ಬಡಿಸಲು ನವೀನ್ ಸಜ್ಜು ಅವರ
ಸುದ್ದಿ ಗೋಷ್ಟಿ ಯಲ್ಲಿ ಮಾಜಿ ಶಾಸಕ ಕೆ.ರಾಜು, ನಗರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಎ.ಬಿ.ಚೇತನ್ ಕುಮಾರ್, ಚಾಮುಂಡೇಶ್ವರಿ ಯುವ ಸೇವಾ ಸಮಿತಿ ಅಧ್ಯಕ್ಷ ನರಸಿಂಹಯ್ಯ, ಕಾಂಗ್ರೆಸ್ ಮುಖಂಡರಾದ ಗುರುವೇಗೌಡ, ಅನಿಲ್ ಜೋಗಿಂದರ್ ಖಾಸಿಮ್ ಸೇರಿದಂತೆ ಹಲವರು ಇದ್ದರು.

